ಕಾಲೋನಿಯ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಕಾಮಗಾರಿಗೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

20

ನರೇಗಲ್ಲ,ಮಾ.6- 2016-17 ಸಾಲಿನ ಎಸ್‍ಸಿಪಿ ಯೋಜನೆಯಲ್ಲಿ ಹಿಂದುಳಿದ ಕಾಲೋ ನಿಯ ಅಭಿವೃದ್ದಿಗಾಗಿ ಗುಣಮಟ್ಟದ ರಸ್ತೆ ಕಾಮಗಾರಿಗೆ ಚಾಲನೆ ಕೊಟ್ಟಿದ್ದು ಗ್ರಾಮಸ್ಥರು ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಗುತ್ತಿಗೆದಾರರಿಗೆ ಸಹಕಾರ ನೀಡಬೇಕು ಎಂದು ಜಿಪಂ ಉಪಾಧ್ಯಕ್ಷೆ ರೂಪಾ ಅಂಗಡಿ ಹೇಳಿದರು.ಅಬ್ಬಿಗೇರಿ ಗ್ರಾಮದ ಎಸ್‍ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣದ 20 ಲಕ್ಷ ರೂ.ಗಳ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.ಕಾಂಗ್ರೆಸ್ ಯುವ ಧುರಿಣ ಮಿಥುನ್ ಪಾಟೀಲ್ ಮಾತನಾಡಿ ಸರ್ಕಾರ ಪ್ರತಿ ಗ್ರಾಮದಲ್ಲಿ ಗುಣಮಟ್ಟದ ಕಾಂಕ್ರಿಟ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಮಾದರಿ ರಸ್ತೆಗಳನ್ನು ನಿರ್ಮಿಸಲು ಶಕ್ತಿಮೀರಿ ಶ್ರಮಿಸುತ್ತಿದೆ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು. ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯ ಕರ್ತರು, ಗ್ರಾಮಸ್ಥರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin