ಲೋಡ್‍ ಶೆಡ್ಡಿಂಗ್ ಭೂತ, ಕತ್ತಲಲ್ಲಿ ಮುಳುಗಲಿದೆ ಕರ್ನಾಟಕ..!

ಈ ಸುದ್ದಿಯನ್ನು ಶೇರ್ ಮಾಡಿ

Load-SHedding--01

ಬೆಂಗಳೂರು, ಮಾ.5- ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿರುವ ಪರಿಣಾಮ ಮತ್ತೆ ಲೋಡ್ ಶೆಡ್ಡಿಂಗ್ ಭೂತ ಆವರಿಸಿದೆ. ಸದ್ಯಕ್ಕೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಸರ್ಕಾರ ಲೋಡ್‍ಶೆಡ್ಡಿಂಗ್‍ಗೆ ಕೈ ಹಾಕಿಲ್ಲ. ಆದರೆ, ಮುಂದಿನ ದಿನಗಳು ಊಹಿಸಲು ಅಸಾಧ್ಯವಾದ ಕಾರಣ ರಾಜ್ಯ ಕತ್ತಲಲ್ಲಿ ಮುಳುಗುವುದು ಬಹುತೇಕ ಖಚಿತವಾಗಿದೆ.  ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಮಹಾನಗರಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಲೋಡ್ ಶೆಡ್ಡಿಂಗ್ ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಪರೀಕ್ಷೆಗಳು ನಡೆಯುತ್ತಿರುವುದರಿಂದ ನಾವು ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಹುದೆಂಬ ಕಾರಣಕ್ಕಾಗಿ ಎಷ್ಟೇ ಕಷ್ಟವಾದರೂ 6 ಗಂಟೆ ತ್ರಿಫೇಸ್ ವಿದ್ಯುತ್ ಗ್ರಾಮೀಣ ಭಾಗಗಳಲ್ಲಿ ಪೂರೈಕೆ ಮಾಡುತ್ತಿದ್ದೇವೆ. ಮುಂದಿನ ದಿನಗಳು ಹೇಗೆ ಇರುತ್ತವೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿದಿನ 103 ಮೆಗಾವ್ಯಾಟ್ ವಿದ್ಯುತ್ ಪೂರೈಕೆ ಮಾಡಬೇಕು. ನಾವು 70 ಮೆಗಾವ್ಯಾಟ್ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಇದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ 6 ಗಂಟೆ ತ್ರಿಫೇಸ್ ವಿದ್ಯುತ್ ಒದಗಿಸುತ್ತಿದ್ದೇವೆ. ದಿನದಿಂದ ದಿನಕ್ಕೆ ಬಳಕೆದಾರರ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಲೋಡ್‍ಶೆಡ್ಡಿಂಗ್ ಅನಿವಾರ್ಯವಾಗಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಾಮಥ್ರ್ಯ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಆದರೂ ಗ್ರಾಹಕರು ಮತ್ತು ರೈತರಿಗೆ ತೊಂದರೆಯಾಗದಂತೆ ನಾವು ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಪ್ರತಿದಿನ ರಾಜ್ಯಾದ್ಯಂತ 221.27 ಮೆಗಾವ್ಯಾಟ್ ವಿದ್ಯುತ್ ಪೂರೈಕೆ ಮಾಡಲಾಗಿದೆ. ಪರೀಕ್ಷೆ ಮುಗಿದ ಬಳಿಕ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಬಹುದು ಎಂಬ ಸುಳಿವು ನೀಡಿದ್ದಾರೆ.  ಗ್ರಾಮೀಣ ಭಾಗಗಳಲ್ಲಿ ರೈತರಿಗೆ 6 ಗಂಟೆ ತ್ರಿಫೇಸ್ ವಿದ್ಯುತ್ ನೀಡಿದರೆ ವಾಣಿಜ್ಯ ಹಾಗೂ ತರಕಾರಿ ಬೆಳೆಗಳನ್ನು ರಕ್ಷಿಸಿಕೊಳ್ಳಬಹುದು. ಯಾವ ಭಾಗದಲ್ಲಿ ಟಿಸಿಗಳು ದುರಸ್ತಿಗೆ ಒಳಗಾಗಿರುತ್ತವೋ ಅಂತಹ ಕಡೆ ತಕ್ಷಣವೇ ರಿಪೇರಿ ಮಾಡುವುದು, ದಿನದ 24 ಗಂಟೆ ವಿದ್ಯುತ್ ಕೇಂದ್ರಗಳು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಕೆಲವು ಸಂದರ್ಭಗಳಲ್ಲಿ ಬೆಳಗ್ಗೆ 7.30 ರಿಂದ 8.30ರ ವರೆಗೆ, 11 ರಿಂದ 12 ಗಂಟೆವರೆಗೆ 2 ರಿಂದ 3 ಗಂಟೆವರೆಗೆ ವಿದ್ಯುತ್ ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ.  ಇದೇ ರೀತಿ ವಸತಿ ನಿವಾಸ, ಕೈಗಾರಿಕಾ ಪ್ರದೇಶಗಳಲ್ಲೂ ಪ್ರತಿದಿನ ಒಂದೊಂದು ಗಂಟೆ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆಯಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ಮುಗಿದ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin