ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

firing

ಮದ್ದೂರು, ಮಾ.6-ತಾಲೂಕಿನ ಚಾಮನಹಳ್ಳಿ ಗ್ರಾಮದ ಕೆಂಪಯ್ಯ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸುಮಾರು 1.5 ಲಕ್ಷ ರೂ. ಮೌಲ್ಯದ ಹುಲ್ಲು ಭಸ್ಮವಾಗಿದೆ.ರೈತ ಕೆಂಪಯ್ಯ ಅವರು ತಮ್ಮ ಜಾನುವಾರುಗಳಿಗಾಗಿ ಶೇಖರಿಸಿಟ್ಟಿದ್ದ ಹುಲ್ಲುಮೆದೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ.
ಬರ ಆವರಿಸಿರುವ ಹಿನ್ನೆಲೆಯಲ್ಲಿ ತಮ್ಮ ಮನೆಯ ದನ-ಕರುಗಳಿಗಾಗಿ ಹುಲ್ಲನ್ನು ಯಾರಿಗೂ ಮಾರಾಟ ಮಾಡದೆ ಶೇಖರಿಸಿಟ್ಟಿದ್ದರು. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ವೇಳೆಗೆ ಹುಲ್ಲು ಸಂಪೂರ್ಣ ಸುಟ್ಟುಹೋಗಿದೆ.ಇದರಿಂದ ರೈತ ಕೆಂಪಯ್ಯ ಅವರಿಗೆ 1.5 ಲಕ್ಷ ರೂ. ನಷ್ಟ ಉಂಟಾಗಿದ್ದು, ಜಾನುವಾರುಗಳಿಗೆ ಮೇವಿಲ್ಲದೆ ಕಂಗಾಲಾಗಿದ್ದಾರೆ.ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin