ಪತ್ನಿಯ ನಿಂದನೆಯಿಂದ ಮನನೊಂದು ನೀರಿನ ಟ್ಯಾಂಕ್ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

8

ಮೈಸೂರು, ಮಾ.7-ಪತ್ನಿಯ ನಿಂದನೆಯಿಂದ ಮನನೊಂದು ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಲಕ್ಷ್ಮೀಪುರ ಠಾಣೆ ಪೊಲೀಸರು ಮನವೊಲಿಸಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದ ಗಾಯತ್ರಿಪುರ ನಿವಾಸಿ ಅರುಣ್‍ರಾವ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಈತ ಇಂದು ಬೆಳಗ್ಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯ ಉದ್ಯಾನವನದಲ್ಲಿರುವ ನೀರಿನ ಟ್ಯಾಂಕ್ ಏರಿ ಕೈಯಲ್ಲಿ ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಇವನನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನ ಮನವೊಲಿಸಿ ಕೆಳಗೆ ಇಳಿಸಿ ವಿಚಾರಣೆಗೊಳಪಡಿಸಿದಾಗ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಇನ್ನೂ ಮಕ್ಕಳಾಗಿಲ್ಲ. ಅದಕ್ಕೆ ನೀನೇ ಕಾರಣ ಎಂದು ನನ್ನನ್ನು ಪತ್ನಿ ಹೀಯ್ಯಾಳಿಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮೀಪುರ ಠಾಣೆ ಪೊಲೀಸರು ಆತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin