ಕಾಲ್‍ಸೆಂಟರ್‍ವೊಂದರ ಚಾಲಕನೊಬ್ಬ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮಾ.8-ಕಾಲ್‍ಸೆಂಟರ್‍ವೊಂದರ ಚಾಲಕನೊಬ್ಬ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕು ಚಿನ್ನಯ್ಯನಪಾಳ್ಯದ ನಿವಾಸಿ ಮರಳಸಿದ್ದಪ್ಪ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಬೆಂಗಳೂರಿನ ಕಾಲ್‍ಸೆಂಟರ್‍ವೊಂದರಲ್ಲಿ ಕಾರು ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಮರಳಸಿದ್ದಪ್ಪ ಕೈ ಸಾಲ ಮಾಡಿಕೊಂಡು ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಿನ್ನೆ ಸಂಜೆ ಶಿರಾ ಮಾರ್ಗವಾಗಿ ಚನ್ನಗಿರಿಗೆ ಹೋಗುವ ಬೈಪಾಸ್ ಬಳಿಯ ಬುಕ್ಕಾಪಟ್ಟಣ ಸರ್ಕಲ್ ಸಮೀಪ ರಸ್ತೆ ಬದಿ ಕಾರು ನಿಲ್ಲಿಸಿ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರಿನಲ್ಲಿ ಡೆತ್‍ನೋಟ್ ದೊರೆತಿದ್ದು, ಅದರಲ್ಲಿ ಜೀವನನಿರ್ವಹಣೆಗಾಗಿ ಅತಿಯಾದ ಕೈ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದ ಸ್ಥಿತಿಯಲ್ಲಿರುವುದರಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿಸಿದ್ದಾರೆ.ಸ್ಥಳಕ್ಕೆ ಶಿರಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin