ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಎನ್‍ಕೌಂಟರ್ : ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Encouenter--014

ಶ್ರೀನಗರ, ಮಾ.9-ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಬೆಂಬಲಿತ ಉಗ್ರಗಾಮಿಗಳ ದುಷ್ಕೃತ್ಯ ಮತ್ತೆ ತೀವ್ರಗೊಂಡಿದ್ದು, ಭದ್ರತಾಪಡೆಗಳು ದಿಟ್ಟ ಪ್ರತ್ಯುತ್ತರ ನೀಡುತ್ತಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪದ್ಗಂ ಪೋರಾ ಪ್ರದೇಶದಲ್ಲಿ ಸೇನಾಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ಧಾರೆ.   ಹತ ಉಗ್ರರನ್ನು ಜಹಂಗೀರ್ ಗನೈ ಮತ್ತು ಶೇರ್ ಗುರ್ಜಿ ಎಂದು ಗುರುತಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷ ಸ್ಥಳೀಯ ಪೊಲೀಸ್ ಪೇದೆ ಹತ್ಯೆ ಪ್ರಕರಣದಲ್ಲಿ ಜಹಂಗೀರ್ ಷಾಮೀಲಾಗಿದ್ದನು ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ಧಾರೆ.

ಈ ಪ್ರದೇಶದಲ್ಲಿ ಇಬ್ಬರು ಉಗ್ರಗಾಮಿಗಳು ಅವಿತಿಟ್ಟುಕೊಂಡಿದ್ಧಾರೆ ಎಂಬ ನಿಖರ ಮಾಹಿತಿ ಮೇರೆ ಸಿಆರ್‍ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ಸಮೂಹದ (ಎಸ್‍ಒಬಿ) ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದಾಗ ಗುಂಡಿನ ಚಕಮಕಿ ನಡೆಯಿತು. ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾದರು ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin