ಚೀಟಿ ವ್ಯವಹಾರದಲ್ಲಿ ನಷ್ಟ : ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

HANGING

ಮೈಸೂರು, ಮಾ.8– ಚೀಟಿ ವ್ಯವಹಾರದಲ್ಲಿ ನಷ್ಟ ಹೊಂದಿದ್ದರಿಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಉತ್ತರಹಳ್ಳಿ ನಿವಾಸಿ ರಮೇಶ್ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೃತ ರಮೇಶ್ ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದು, ಇದರೊಂದಿಗೆ ಫೈನಾನ್ಸ್ ಕೂಡ ನಡೆಸುತ್ತಿದ್ದ ಎನ್ನಲಾಗಿದೆ.ವ್ಯವಹಾರದಲ್ಲಿ ನಷ್ಟ ಹೊಂದಿದ್ದರಿಂದ ಬೇಸರಗೊಂಡ ಈತ ನಿನ್ನೆ ಭೋಗಾದಿ ಸಮೀಪದ ಖಾಲಿ ನಿವೇಶನವೊಂದರ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶವ ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸರಸ್ವತಿಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

 

Facebook Comments

Sri Raghav

Admin