ಪಾರ್ವತಮ್ಮನವರ ಆರೋಗ್ಯದಲ್ಲಿ ಚೇತರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Parvatamm-Rajkumar

ಬೆಂಗಳೂರು, ಮಾ.9– ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯ ಸಾಕಷ್ಟು ಸುಧಾರಿಸಿದೆ ಎಂದು ರಾಘವೇಂದ್ರ ರಾಜ್‍ಕುಮಾರ್ ಅವರು ಈ ಸಂಜೆಗೆ ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಮೊನ್ನೆ ದಿಢೀರನೆ ಏರುಪೇರಾದ ಕಾರಣ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲು ಮಾಡಲಾಗಿತ್ತು. ನುರಿತ ವೈದ್ಯರ ತಂಡವು ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಚಿಕಿತ್ಸೆ ನೀಡಿತು. ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದರಿಂದ ನಿನ್ನೆಯೇ ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‍ಗೆ ಶಿಫ್ಟ್ ಮಾಡಿದ್ದರು. ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಪುನಿತ್ ರಾಜ್‍ಕುಮಾರ್, ವಿನಯ್ ರಾಜ್‍ಕುಮiÁರ್, ಚಿನ್ನೇಗೌಡ ಮತ್ತು ಅರ ಕುಟುಂಬವರ್ಗದವರು ಆಸ್ಪತ್ರೆಯಲ್ಲಿ ಹಾಜರಿದ್ದು, ಪಾರ್ವತಮ್ಮನವರ ಯೋಗಕ್ಷೇಮ ವಿಚಾರಿಸುತ್ತಿದ್ದರು.

ಅಮ್ಮನ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಇಂದು ತವಾಗಿಯೇ ಬೆಳಗಿನ ಉಪಹಾರ ಸೇವಿಸಿದರು. ಪರಿಸ್ಥಿತಿ ನೋಡಿಕೊಂಡು ಸದ್ಯದಲ್ಲೇ ಡಿಸ್‍ಚಾರ್ಜ್ ಮಾಡುತ್ತಾರೆ ಎಂದು ಹೇಳಿದ ರಾಘವೆಂದ್ರ ರಾಜ್‍ಕುಮಾರ್, ತಮ್ಮ ತಾಯಿಯ ಯೋಗಕ್ಷೇಮ ವಿಚಾರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin