ಪೊಲೀಸ್ ಸರ್ಪಗಾವಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

POUC--0op'k;jkhjmfggdxfvszd

ಬೆಂಗಳೂರು, ಮಾ.9- ವಿದ್ಯಾರ್ಥಿ ಜೀವನದ ಎರಡನೇ ಅತಿ ಮುಖ್ಯ ಘಟಕ ಎನಿಸಿದ ದ್ವೀತಿಯ ಪಿಯುಸಿ ಪರೀಕ್ಷೆ ಇಂದು ರಾಜ್ಯಾದ್ಯಂತ ಭಾರೀ ಬಿಗಿ ಭದ್ರತೆ ನಡುವೆ ನಡೆಯಿತು.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಇದೇ ಮೊದಲ ಬಾರಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ಅಭೂತ ಪೂರ್ವ ಭದ್ರತೆಯನ್ನು ಕೈಗೊಂಡಿತ್ತು. ಪೋಲೀಸರ ಸರ್ಪಗಾವಲಿನ ನಡುವೆಯೇ ಮೊದಲ ದಿನವಾದ ಇಂದು ಇತಿಹಾಸ ಹಾಗೂ ಜೀವಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಿತು.  ಎಲ್ಲಿಯೂ ಕೂಡ ಪ್ರಶ್ನೆ ಪತ್ರಿಕೆ ಸೋರಿಕೆ, ಅದಲು-ಬದಲು, ನಕಲು ಸೇರಿದಂತೆ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಮೊದಲ ದಿನ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ ಎಂದು ವರದಿಯಾಗಿದೆ.

ಪರೀಕ್ಷಾ ಕೊಠಡಕ್ಕೆ 10 ನಿಮಿಷ ತಡವಾಗಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂಬ ಮಂಡಳಿಯ ಸೂಚನೆ ಹಿನ್ನೆಲೆಯಲ್ಲಿ ಬಹುತೇಕ ಕಡೆ ವಿದ್ಯಾರ್ಥಿಗಳು ಅರ್ಧಗಂಟೆ ಮುಂಚಿತವಾಗಿಯೇ ಆಗಮಿಸಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತ್ತು.  ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ರಾಜಧಾನಿ ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಬಳ್ಳಾರಿ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್ ಹಾಗೂ ಕಲಬುರಗಿ ಸೇರಿದಂತೆ ಎಲ್ಲೆಡೆ ಶಾಂತಿಯುತವಾಗಿ ಪರೀಕ್ಷೆ ನಡೆದಿದೆ.

ಸಿಸಿ ಟಿವಿ ಅಳವಡಿಕೆ:

ಕಳೆದ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಪ್ರಮಾಣ ಹೆಚ್ಚಾಗಿದ್ದರಿಂದ ಈ ಬಾರಿ ಮಂಡಳಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಟಿವಿ ಅಳವಡಿಸಿತ್ತು. ಅಲ್ಲದೆ, ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಕ್ಷನ್ 144 ಹಾಕಲಾಗಿತ್ತು. ಇದಕ್ಕೂ ಮುನ್ನ ಆಯಾ ಜಿಲ್ಲಾ -ಖಜಾನೆ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆ ಬಂಡಲ್‍ಗಳನ್ನು ಪೆÇಲೀಸರ ಬಿಗಿ ಭದ್ರತೆ ನಡುವೆ ತರಲಾಯಿತು.  ಆಯಾ ಕೇಂದ್ರಗಳ ವೀಕ್ಷಕರ ಸಮ್ಮುಖದಲ್ಲಿ ಪ್ರಶ್ನೆ ಪತ್ರಿಕೆಗಳ ಬಂಡಲ್‍ಗಳನ್ನು ತೆರೆಯಲಾಯಿತು. ಈ ಬಾರಿ ರಾಜ್ಯದಲ್ಲಿ ಒಟ್ಟು 6,48,490 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 3,48,562 ವಿದ್ಯಾರ್ಥಿಗಳು ಹಾಗೂ 3,35,909 ವಿದ್ಯಾರ್ಥಿನಿಯರು ಹಾಗೂ ಇದೇ ಮೊದಲಬಾರಿಗೆ 19 ತೃತೀಯ ಲಿಂಗಿಗಳು ಪರೀಕ್ಷೆಗೆ ಬರೆದರು. ರಾಜ್ಯಾದ್ಯಂತ 998 ಪರೀಕ್ಷಾ ಕೇಂದ್ರಗಳಲ್ಲಿ 857  ಸಾಮಾನ್ಯ, 103 ಸೂಕ್ಷ್ಮ, 38 ಅತಿ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ.

ಬಿಗಿ ಭದ್ರತೆ:

ಇದೇ ಮೊದಲ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಪೊಲೀಸರು ಸರ್ಪಗಾವಲು ಹಾಕಲಾಗಿತ್ತು. ಕೆಲವು ಕಡೆ ಕಿಡಿಗೇಡಿಗಳು ತಮ್ಮ ತಮ್ಮ ಸಂಬಂಧಿಕರಿಗೆ ನಕಲು ಮಾಡಲು ಅನುಕೂಲ ಕಲ್ಪಿಸಬಹುದೆಂಬ ಹಿನ್ನೆಲೆಯಲ್ಲಿ ಭಾರೀ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.  ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಹಾಕಿದ್ದರಿಂದ ಮೂವರಿಗಿಂತ ಹೆಚ್ಚು ಗುಂಪುಗೂಡದಂತೆ ಎಚ್ಚರಿಸಲಾಗಿತ್ತು. ಮೊದಲ ದಿನವಾದ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಗೊಂದಲ, ಗೋಜಲು ಇಲ್ಲದೆ ನಡೆದಿರುವುದು ಕೇವಲ ಅಧಿಕಾರಿಗಳಿಗೆ ಮಾತ್ರವಲ್ಲದೆ ಪೋಷಕರಲ್ಲೂ ನೆಮ್ಮದಿ ತಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin