ಸುನಿಲ್ ಹತ್ಯೆ ಆರೋಪಿಗಳಿಗಾಗಿ ಶೋಧ

ಈ ಸುದ್ದಿಯನ್ನು ಶೇರ್ ಮಾಡಿ

crime

ಬೆಂಗಳೂರು, ಮಾ.9– ಬಸವೇಶ್ವರನಗರದಲ್ಲಿ ಯುವಕನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಸವೇಶ್ವರನಗರ ಪೊಲೀಸರು ಶೋಧ ಕೈಗೊಂಡಿದ್ದಾರೆ. ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದ್ದು, ಪೊಲೀಸ್ ತಂಡವೊಂದು ಅಲ್ಲಿಗೆ ತೆರಳಿದೆ.  ನಿನ್ನೆ ಕಮಲಾನಗರದಲ್ಲಿ ಕ್ಷುಲ್ಲಕ ವಿಚಾರಕ್ಕಾಗಿ ಸುನಿಲ್ ಎಂಬಾತನನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿದ ಐದಾರು ಮಂದಿ ದುಷ್ಕರ್ಮಿಗಳು ಮನಬಂದಂತೆ ಮಚ್ಚು-ಲಾಂಗ್‍ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಕೊಲೆಯನ್ನು ಸ್ಪಾಟ್ ನಾಗ ಮತ್ತು ಈತನ ಸಹಚರರು ಮಾಡಿದ್ದಾರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಗಳ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆರೋಪಿಗಳು ಘಟನೆ ನಡೆದ ಬಳಿಕ ನಗರದಿಂದ ಕಾಲ್ಕಿತ್ತು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ತಂಡವೊಂದು ಅಲ್ಲಿಗೆ ತೆರಳಿ ತನಿಖೆ ಕೈಗೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin