ನೀರು ಕುಡಿಯಲು ಬಂದು ಕೆರೆಯ ಕೆಸರಿನಲ್ಲಿ ಸಿಲುಕಿದ್ದ ಆನೆ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

Elephant--01

ಕೊಳ್ಳೆಗಾಲ,ಮಾ.10-ನೀರು ಕುಡಿಯಲು ಕೆರೆಗೆ ಬಂದು ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಆನೆಯನ್ನು ಅರಣ್ಯ ಅಧಿಕಾರಿಗಳು ರಕ್ಷಿಸಿದ್ದಾರೆ. ಚಾಮರಾಜನಗರದ ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನ ಬೆಟ್ಟದ ಅರಣ್ಯ ಪ್ರದೇಶದ ಕೃಷ್ಣಯ್ಯನ ಕೆರೆಗೆ ನೀರು ಕುಡಿಯಲೆಂದು ಆನೆಯೊಂದು ಬಂದಿದೆ. ಕೆರೆಗೆ ಇಳಿದ ಆನೆ ಕೆಸರಿನಲ್ಲಿ ಸಿಲುಕಿ ಮೇಲೆ ಬರಲು ಸಾಧ್ಯವಾಗದೆ ಒದ್ದಾಡುತ್ತಿದ್ದನ್ನು ಕಂಡ ಗ್ರಾಮಸ್ಥರು ತಕ್ಷಣವೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಆನೆಗೆ ಹಗ್ಗವನ್ನು ಕಟ್ಟಿ ಜೆಸಿಬಿ ಮೂಲಕ ಮೇಲಕೆತ್ತಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin