ಮುಸ್ಲಿಂ ಸಮುದಾಯ ಸಂಸ್ಥೆಗಳಿಗೆ 9.33 ಲಕ್ಷ ರೂ.ಅನುದಾನ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

nanjanagudu-3

ನಂಜನಗೂಡು, ಮಾ.10- ನಂಜನಗೂಡು ವಿಧಾನಸಭಾ ಕ್ಷೇತ್ರದ ಮುಸ್ಲಿಂ ಸಮುದಾಯ ಸಂಸ್ಥೆಗಳಿಗೆ 9.33 ಲಕ್ಷ ಅನುದಾನ ಬಿಡುಗಡೆಯನ್ನು ಮಾಡಲಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಮಹಮದ್ ಅಕ್ಬರ್ ಅಲೀಂ ತಿಳಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಶಿಕ್ಷಣ ಸಚಿವ ತನ್ವೀರ್ ಸೇಠ್ ಭೇಟಿ ಮಾಡಿ, ನಂಜನಗೂಡು ಕ್ಷೇತ್ರದಲ್ಲಿ ಹೆಚ್ಚಾಗಿ ಮುಸ್ಲಿಂ ಸಮುದಾಯ ವಾಸಿಸುತ್ತಿದ್ದು, ಮಸೀದಿ, ಖಬರಸ್ಥಾನ, ಈದ್ಗಾ, ಮದರಸಾಗಳ ಅಭಿವೃದ್ಧಿಗೆ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿ, ಅನುದಾನ ನೀಡಿದ್ದಾರೆ. ಅಲ್ಲದೇ ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ 2 ಸಾವಿರ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಮೈಕ್ರೋ ಕ್ರೆಡಿಟ್ ಯೋಜನೆಯಡಿ ತಲಾ 15 ಸಾವಿರ ರೂ.ಗಳಂತೆ 3 ಕೋಟಿ ಸಾಲ ಸೌಲಭ್ಯ ನೀಡಿ ಮುಸ್ಲಿಂ ಸಮುದಾಯದ ಅಭಿವೃದ್ದಿ ಗೆ ಸಹಕರಿಸಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಮುಸ್ಲಿಂ ಸಮುದಾಯದ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin