ಉತ್ತರ ಪ್ರದೇಶದಲ್ಲಿ ಎಸ್ಪಿ- ಕಾಂಗ್ರೆಸ್ ಧೂಳಿಪಟ : ಬಿಜೆಪಿ ಸಂಭ್ರಮಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

BJP--01

ನವದೆಹಲಿ, ಮಾ.11– ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವದ ಸುನಾಮಿಯಿಂದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಧೂಳಿಪಟವಾಗಿದೆ. ಈ ಎರಡೂ ರಾಜ್ಯಗಳಲ್ಲಿ ಬಣ್ಣದ ಹಬ್ಬ ಹೋಳಿಗೆ ಮುನ್ನವೇ ಬಿಜೆಪಿಗೆ ಕೇಸರಿ ವಿಜಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ.  ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಆರಂಭದಿಂದಲೇ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತು. ಡೋಲು-ತಮಟೆಗಳನ್ನು ಬಡಿಯುತ್ತ ಬೀದಿಗಿಳಿದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಿಹಿ ವಿತರಿಸಿ ಗೆಲುವಿನ ಸಂಭ್ರಮ ಆಚರಿಸಿದರು. ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರಗಳು ಮತ್ತು ಕಮಲ ಲಾಂಛನದ ಕೇಸರಿ ಬಾವುಟಗಳು ರಾರಾಜಿಸಿದವು.  ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಬಿಜೆಪಿ ಕಚೇರಿಗಳ ಮುಂದೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡವು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin