ಅಮೆರಿಕ ಅಧ್ಯಕ್ಷ ಟ್ರಂಪ್ ಒಳಗಿರುವಾಗ ಶ್ವೇತಭವನ ಪ್ರವೇಶಿಸಲೆತ್ನಿಸಿದ ವ್ಯಕ್ತಿಯ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Trump--01

ವಾಷಿಂಗ್ಟನ್, ಮಾ.12- ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವ ನಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ಧಾರೆ.  ವೈಟ್‍ಹೌಸ್‍ಗೆ ಶುಕ್ರವಾರ ಮಧ್ಯರಾತ್ರಿ ವೇಳೆ ನುಸುಳಲು ಆರೋಪಿಯು ಯತ್ನಿಸಿದ್ದು, ಈ ಘಟನೆ ನಡೆದಾಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟ್ಟಡದ ಒಳಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.  ಅತಿಕ್ರಮಣ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಬ್ಯಾಗ್‍ನನ್ನು ಪರಿಶೀಲಿಸಲಾಗಿ ಅದರಲ್ಲಿ ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬರಲಿಲ್ಲ. ಈ ಘಟನೆ ಬಗ್ಗೆ ಟ್ರಂಪ್ ಮತ್ತು ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಜಾನ್ ಕೆಲ್ಸಿ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin