ಮುಂಬರುವ ಚುನಾವಣೆಯಲ್ಲಿ ಹನೂರು ಕ್ಷೇತ್ರದಿಂದ ವಿ.ಸೋಮಣ್ಣ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

V.Somanna-Somanna

ಮೈಸೂರು, ಮಾ.12- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜನಗರದ ಹನೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನೂರು ಕ್ಷೇತ್ರದಿಂದ ಸ್ಪರ್ಧಿಸಲು ನಾನು ಇಚ್ಚಿಸಿದ್ದು, ಇದರ ಬಗ್ಗೆ ಈಗಾಗಲೇ ವರಿಷ್ಠರಿಗೆ ತಿಳಿಸಿದ್ದೇನೆ. ಈ ಬಗ್ಗೆ ಅವರೇ ತೀರ್ಮಾನಿಸುತ್ತಾರೆ ಎಂದರು. ಪರಿಮಳ ನಾಗಪ್ಪ ಅವರು ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಬರಲಿ. ಅವರಂತೆ ನೂರಾರು ಮಂದಿ ಪಕ್ಷಕ್ಕೆ ಬರುತ್ತಾರೆ. ಟಿಕೆಟ್ ನೀಡುತ್ತಾರೆ ಎಂಬ ಉದ್ದೇಶದಿಂದ ಪಕ್ಷಕ್ಕೆ ಬಂದರೆ ಅವರಿಗೆ ಟಿಕೆಟ್ ಸಿಗುವುದಿಲ್ಲ. ಪರಿಮಳ ನಾಗಪ್ಪ ಅವರು ಬಿಜೆಪಿಗೆ ಬರುವುದಾದರೆ ನನ್ನದೇನು ಅಭ್ಯಂತರವಿಲ್ಲ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin