ಮ್ಯಾನ್‍ಹೋಲ್‍ನಲ್ಲಿ ಪೌರಕಾರ್ಮಿಕರ ಸಾವಿನ ಪ್ರಕರಣ, ರಾಮ್ಕಿ ಕಂಪೆನಿಯ ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Man-hole

ಬೆಂಗಳೂರು, ಮಾ.13- ಮ್ಯಾನ್‍ಹೋಲ್ ಸ್ವಚ್ಛಗೊಳಿಸಲು ಹೋಗಿ ಮೂವರು ಕಾರ್ಮಿಕರು ಮೃತಪಟ್ಟ ಪ್ರಕರಣ ಸಂಬಂಧ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.  ಬಾಬುರೆಡ್ಡಿ, ಆಂಜನೇಯಲು ಮತ್ತು ಎನ್.ಟಿ. ರೆಡ್ಡಿ ಬಂಧಿತರು. ಬಂಧಿತರೆಲ್ಲರೂ ಮ್ಯಾನ್‍ಹೋಲ್ ನಿರ್ವಹಣೆ ಗುತ್ತಿಗೆ ಪಡೆದಿದ್ದ ರಾಮ್ಕಿ ಕಂಪನಿಯ ಉದ್ಯೋಗಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಮಾ.7ರ ಮಧ್ಯರಾತ್ರಿ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿನ ಮ್ಯಾನ್‍ಹೋಲ್ ದುರಸ್ತಿ ನಡೆಸಲು ಒಳಗೆ ಇಳಿದ ಮೂವರು ಕಾರ್ಮಿಕರು ಮೃತಪಟ್ಟಿದ್ದರು.

ಈ ಘಟನೆಯಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗಳು ಕೇಳಿ ಬಂದಿತ್ತು. ಮೇಯರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಜಾರ್ಜ್ ಅವರು ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅಂದಿನಿಂದ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು ಕಳೆದ ರಾತ್ರಿ ಆರೋಪಿಗಳನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin