ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಪ ಚುನಾವಣೆಗೆ ತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

BJP-core-Comit

ನವದೆಹಲಿ, ಮಾ.14-ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜಯ ಸಾಧಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.   ಅಲ್ಲದೆ, ರಾಜ್ಯ ಬಿಜೆಪಿ ಘಟಕದಲ್ಲಿ ತಲೆದೋರಿರುವ ಭಿನ್ನಮತ ಉಪಶಮನದ ಹಿನ್ನೆಲೆಯಲ್ಲಿಯೂ ಈ ಸಭೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.

ರಾಜ್ಯದ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರಿನಲ್ಲಿ ನಡೆಯುವುದು ವಾಡಿಕೆ. ಆದರೆ, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದಿಂದ ರಾಷ್ಟ್ರೀಯ ಧುರೀಣರನ್ನು ಅಭಿನಂದಿಸಲು ಮತ್ತು ರಾಜ್ಯದ ಕೇಂದ್ರ ಸಚಿವರು ದೆಹಲಿಯಲ್ಲೇ ವಾಸ್ತವ್ಯ ಹೂಡಿ ಕಾರ್ಯಮಗ್ನರಾಗಿರುವುದರಿಂದ ಈ ಬಾರಿ ದೆಹಲಿಗೆ ಕೋರ್ ಕಮಿಟಿ ಸಭೆ ಸ್ಥಳಾಂತರಗೊಂಡಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಅನಂತಕುಮಾರ್ ಅವರ ದೆಹಲಿ ನಿವಾಸದಲ್ಲಿ ಸಂಜೆ 6 ಗಂಟೆಗೆ ಸಭೆಗೆ ದಿನಾಂಕ ನಿಗದಿಯಾಗಿದೆ.

ಸಭೆಯ ಅಜೆಂಡಾ :

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆಗಳ ಉಪ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರಗಳು ಹಾಗೂ ಅಭ್ಯರ್ಥಿ ಗೆಲುವಿಗೆ ಅನುಸರಿಸಬೇಕಾದ ಪ್ರಚಾರ ತಂತ್ರಗಳನ್ನು ಈ ಸಭೆಯಲ್ಲಿ ಅಂತಿಮಗೊಳಿಸಲಾಗುತ್ತದೆ. ಯಾವ ನಾಯಕರು ಯಾವ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬೇಕು. ಮತದಾರರನ್ನು ಸೆಳೆಯಲು ಯಾವ ತಂತ್ರಗಳನ್ನು ಅನುಸರಿಸಬೇಕು ಇತ್ಯಾದಿ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.   ಅಲ್ಲದೇ ರಾಜ್ಯ ಬಿಜೆಪಿ ಘಟಕದಲ್ಲಿ ಇತ್ತೀಚೆಗೆ ಹೆಚ್ಚಾಗಿರುವ ಅಂತ:ಕಲಹ ಮತ್ತು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಎರಡೂ ಕ್ಷೇತ್ರಗಳಲ್ಲೂ ಶತಾಯಗತಾಯ ಜಯಿಸಿ ಮೋದಿ ಪ್ರಾಬಲ್ಯಕ್ಕೆ ಕರ್ನಾಟಕದಲ್ಲೂ ಮುನ್ನುಡಿ ಬರೆಯಬೇಕೆಂಬ ಉದ್ದೇಶವನ್ನು ಸಭೆ ಹೊಂದಿದೆ. ರಾಜ್ಯದ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಜಿ.ಎಂ.ಸಿದ್ದೇಶ್ವರ, ರಾಜ್ಯ ಬಿಜೆಪಿ ಅಗ್ರಮಾನ್ಯ ಮುಖಂಡರಾದ ಬಿ.ಎಸ್. ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್ ಜೋಶಿ, ಆರ್.ಅಶೋಕ್ ಮೊದಲಾದವರು ಸಭೆಯಲ್ಲಿ ಭಾಗವಹಿಸುವರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin