ಟಾಟಾಸುಮೋ ಪಲ್ಟಿ : ಒಬ್ಬ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮಾ.15- ಟಾಟಾಸುಮೋ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜೈದಿನ್ ಮೃತಪಟ್ಟವರು.ಮೂಲತಃ ಬೀದರ್‍ನ ಬಸವಕಲ್ಯಾಣ ನಿವಾಸಿಗಳಾದ ಜೈದಿನ್, ಪರಮೇಶ್, ವೆಂಕಟೇಶ್, ರಾಜ್‍ಕುಮಾರ್, ಅಶೋಕ್ ಸ್ನೇಹಿತರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ಕೆಲಸ ಮಾಡುತ್ತಿದ್ದರು.ರಾತ್ರಿ ಈ ಐವರು ಟಾಟಾಸುಮೋದಲ್ಲಿ ಬೀದರ್‍ಗೆ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಸಿಬಿ ಅಗ್ರಹಾರದ ಬಳಿ ಪಲ್ಟಿ ಹೊಡೆದಿದೆ.ಪರಿಣಾಮವಾಗಿ ಟಾಟಾಸುಮೋದಲ್ಲಿದ್ದ ಐವರು ಗಾಯಗೊಂಡಿದ್ದು, ಇವರ ಪೈಕಿ ಜೈದಿನ್ ಗಂಭೀರ ಗಾಯಗೊಂಡಿದ್ದರಿಂದ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.ಉಳಿದ ನಾಲ್ವರು ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸುದ್ದಿ ತಿಳಿದ ಕೂಡಲೇ ಕಳ್ಳಂಬೆಳ್ಳ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ಚಂದ್ರಶೇಖರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin