ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಅವಳಿ ಸ್ಫೋಟ

ಈ ಸುದ್ದಿಯನ್ನು ಶೇರ್ ಮಾಡಿ

Train-Blast

ಆಗ್ರಾ, ಮಾ.18-ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಕಡಿಮೆ ತೀವ್ರತೆಯ ಎರಡು ಬಾಂಬ್‍ಗಳು ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಭಯೋತ್ಪಾದಕ ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿರುವ ಪತ್ರವು ಘಟನಾ ಸ್ಥಳದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.   ಅಗ್ರಾದಿಂದ 20 ಕಿ.ಮೀ. ದೂರದಲ್ಲಿರುವ ಇನ್ನೊಂದು ರೈಲು ನಿಲ್ದಾಣದ ಹಳಿ ಮೇಲೆ ದೊಡ್ಡ ಬಂಡೆಯೊಂದಕ್ಕೆ ಅಂಡಮಾನ್ ಎಕ್ಸ್‍ಪ್ರೆಸ್ ಡಿಕ್ಕಿ ಹೊಡೆದ ಘಟನೆ ನಂತರ ಈ ಅವಳಿ ಸ್ಪೋಟಗಳು ನಡೆದಿವೆ.

ಈ ಎರಡೂ ಪ್ರಕರಣಗಳಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin