ನಾಳೆ ಜಾಟ್‍ ಸಮುದಾಯದವರಿಂದ ಸಂಸತ್ ಮುತ್ತಿಗೆ, ವ್ಯಾಪಕ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

Parliament

ನವದೆಹಲಿ/ಚಂಡೀಘಡ,ಮಾ.19- ಸರ್ಕಾರಿ ಹುದ್ದೆ ಮತ್ತು ಶೈಕ್ಷಣಿಕ ಮೀಸಲಾತಿಗೆ ಆಗ್ರಹಿಸಿ ಜಾಟ್ ಸಮುದಾಯ ನಾಳೆ ಸಂಸತ್‍ಗೆ ಮುತ್ತಿಗೆ ಹಾಕಲು ನಿರ್ಧರಿಸಿರುವುದರಿಂದ ದೆಹಲಿ ಮತ್ತು ಹರಿಯಾಣದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.   ಅಖಿಲ ಭಾರತ ಜಾಟ್ ಆರಕ್ಷಣ್ ಸಂಘರ್ಷ ಸಮಿತಿ(ಎಐಜೆಎಎಸ್‍ಎಸ್) ಕಾರ್ಯಕರ್ತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೆಹಲಿಯಲ್ಲಿ ಸಂಸತ್ ಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಪಾರ್ಲಿಮೆಂಟ್ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

ಈ ಮಧ್ಯೆ ಪ್ರತಿಭಟನೆಯನ್ನು ಕೈಬಿಡುವಂತೆ ಜಾಟ್ ಸಮುದಾಯದ ಮನವೊಲಿಸಲು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟರ್ ಆ ಸಮುದಾಯದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin