ಮನೆ ಬೀಗ ಒಡೆದು ಚಿನ್ನಾಭರಣ-ನಗದು ದೋಚಿ ಪರಾರಿ 

ಈ ಸುದ್ದಿಯನ್ನು ಶೇರ್ ಮಾಡಿ

ದೊಡ್ಡಬಳ್ಳಾಪುರ,ಮಾ.20- ಮನೆ ಬೀಗ ಒಡೆದ ಕಳ್ಳರು ಬೀರುವಿನಲ್ಲಿದ್ದ 10 ಸಾವಿರ ನಗದು, ಚಿನ್ನಾಭರಣ ದೋಚಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಸಂದ್ರ ಗ್ರಾಮದ ರತ್ನಮ್ಮ ಎಂಬುವರು ಒಬ್ಬರೇ ಜೀವನ ಸಾಗಿಸುತ್ತಿದ್ದು, ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದಾಗ, ಬೀಗ ಹೊಡೆದ ಕಳ್ಳರು ಮನೆಯೊಳಗೆ ನುಗ್ಗಿ ಬೀರುವಿನಲ್ಲಿದ್ದ 10 ಸಾವಿರ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin