ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

hanging--suicide

ಬೆಳ್ತಂಗಡಿ, ಮಾ.20- ಮರಕ್ಕೆ ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.ಬಿಹಾರ ಮೂಲದ ರಾಮ್‍ದಾಸ್ (22) ಆತ್ಮಹತ್ಯೆಗೆ ಶರಣಾದ ಯುವಕ.ಉಜಿರೆ ಗ್ರಾಮದ ಅನುಗ್ರಹ ಶಾಲೆ ಸಮೀಪವಿದ್ದ ಮರಕ್ಕೆ ನೇಣು ಬಿಗಿದು ರಾಮ್‍ದಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin