ರೈಲ್ವೆ ಮೆಲ್ಸೇತುವೆ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ,ಮಾ.20- ನಗರದ ಗಾಂಧಿ ಸರ್ಕಲ್‍ನಿಂದ ಅಶೋಕ ಟಾಕೀಸ್ ಮೂಲಕ ಮಂಡಿಪೇಟೆ ರಸ್ತೆವರೆಗೂ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಗ್ಗೆ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾದವ್ ಮಾತನಾಡಿ, ಈ ಮೇಲ್ಸೇತುವೆ ಕಾಮಗಾರಿಗಾಗಿ ಸಂಸದ ಸಿದ್ದೇಶ್ವರ್ ಅವರು ಕೇಂದ್ರ ಸರ್ಕಾರದಿಂದ 35 ಕೋಟಿ ರೂ. ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಈ ಕೆಲಸ ಪ್ರಾರಂಭ ಮಾಡಲು ಬಿಡದೆ ಜಿಲ್ಲಾಧಿಕಾರಿ ಮೂಲಕ ಒತ್ತಡ ಹೇರಿ ವಿಳಂಬ ಅನುಸರಿಸುತ್ತಿರುವುದು ಅನುಮಾನ ಮೂಡಿಸಿದೆ ಎಂದರು.

ಪ್ರಭಾವಿಗಳ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಗಳು ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಗ್ಗೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದರು.ಬಿಜೆಪಿಯ ನೂರಾರು ಕಾರ್ಯಕರ್ತರು ಅಶೋಕ ಟಾಕೀಸ್ ಬಳಿ ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin