ಹೈವೇ ಪೆಟ್ರೋಲಿಂಗ್ ಕಾರ್‍ಗೆ ಲಾರಿ ಡಿಕ್ಕಿ : ಎಎಸ್‍ಐ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ASI-Accident-DeaD-C

ತುಮಕೂರು, ಮಾ.20- ಹೈವೆ ಪೆಟ್ರೋಲಿಂಗ್ ಇನೋವಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಎಸ್‍ಐಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರಾ-ನೆಲಹಾಳ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಕ್ಯಾತ್ಸಂದ್ರ ಪೊಲೀಸ್ ಠಾಣೆ ಎಎಸ್‍ಐ ವಿಶ್ವೇಶ್ವರಯ್ಯ (44) ಮೃತಪಟ್ಟ ದುರ್ದೈವಿ. ನಿನ್ನೆ ಸಂಜೆ ವಿಶ್ವೇಶ್ವರಯ್ಯ ಅವರು ಠಾಣೆಗೆ ಹೋಗಿ ವಾಪಸ್ ಬಂದು ವಾಹನ ಹತ್ತುವಾಗ ವೇಗವಾಗಿ ಬಂದ ಲಾರಿಯು ಹಿಂದಿನಿಂದ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಎಸ್‍ಪಿ ಇಶಾಪಂತ್, ಎಎಸ್‍ಪಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಶ್ವೇಶ್ವರಯ್ಯ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin