ಏಪ್ರಿಲ್‍ನಲ್ಲಿ ಏಳನೇ ವೇತನ ಆಯೋಗ ರಚನೆ : ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-025

ಬೆಂಗಳೂರು, ಮಾ.21- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗವನ್ನು ಏಪ್ರಿಲ್‍ನಲ್ಲಿ ರಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, 2017-18ರ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಲು ಏಳನೇ ವೇತನ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರು ಹಾಗೂ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಐಎಎಸ್ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ವೇತನ ನಿಯಮಗಳ ಪ್ರಕಾರವೇ ಭತ್ಯೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ವೇತನ ನಿಯಮವಳಿಗಳ ಪ್ರಕಾರ ಭತ್ಯೆ ನೀಡಲಾಗುತ್ತಿದೆ ಎಂದರು.  ಕಾಲಕಾಲಕ್ಕೆ ಉಂಟಾಗುವ ಬೆಲೆ ಏರಿಕೆಯ ಸಂಕಷ್ಟ ಸರಿದೂಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಾರ್ಷಿಕ ಎರಡು ಬಾರಿ ತುಟ್ಟಿಭತ್ಯೇ ಪರಿಷ್ಕರಿಸುವುದರಿಂದ ನೌಕರರಿಗೆ ಆರ್ಥಿಕ ತೊಂದರೆ ಉಂಟಾಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin