ಡೈರಿ ನಕಲಿ ಎಂದು ವಿಧಿ-ವಿಜ್ಞಾನ ಪ್ರಯೋಗಾಲಯ ಹೇಳಿರುವುದು ಮೂರ್ಖತನದ ಪರಮಾವಧಿ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-BJPಮೈಸೂರು, ಮಾ.21- ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಮನೆಯಲ್ಲಿ ಐಟಿ ದಾಳಿ ವೇಳೆ ಸಿಕ್ಕಿರುವ ಡೈರಿ ನಕಲಿ ಎಂದು ವಿಧಿ-ವಿಜ್ಞಾನ ಪ್ರಯೋಗಾಲಯ ಹೇಳಿರುವುದು ಮೂರ್ಖತನದ ಪರಮಾವಧಿ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ಕಾಣಿಕೆ ಕುರಿತು ಡೈರಿಯಲ್ಲಿ ಉಲ್ಲೇಖವಾಗಿರುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಲೆಬುಡವಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಹೈಕಮಾಂಡ್‍ಗೆ ರಾಜ್ಯದ ಸಚಿವರು ಕೋಟಿ ಕೋಟಿ ರೂ. ಕಪ್ಪ ನೀಡಿರುವುದು ನೂರಕ್ಕೆ ನೂರರಷ್ಟು ಸತ್ಯ. ಸ್ಟೀಲ್‍ಬ್ರಿಡ್ಜ್ ಯೋಜನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬಕ್ಕೆ 65 ಕೋಟಿ ಕಿಕ್‍ಬ್ಯಾಕ್ ಪಡೆದಿರುವುದು ಡೈರಿಯಲ್ಲಿ ಉಲ್ಲೇಖವಾಗಿದೆ. ಈ ಪ್ರಕರಣದಿಂದ ಸಿಎಂ ವಿಚಲಿತರಾಗಿದ್ದಾರೆ. ಡೈರಿ ನಕಲಿ ಎಂದು ಹೇಳುವುದಾದರೆ ಸಿಬಿಐ ತನಿಖೆಗೆ ವಹಿಸಲಿ ಸವಾಲು ಹಾಕಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin