ತಮಿಳುನಾಡಿಗೆ ಪ್ರತಿನಿತ್ಯ 2,000 ಕ್ಯುಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Cauvery-Supreme--Court

ನವದೆಹಲಿ, ಮಾ.21-ತಮಿಳುನಾಡಿಗೆ ಪ್ರತಿದಿನವೂ 2,000 ಕ್ಯುಸೆಕ್ಸ್ ನೀರು ಹರಿಸುವುದನ್ನು ಮುಂದುವರಿಸಬೇಕೆಂಬ ತನ್ನ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡುವ ಮೂಲಕ ಕರ್ನಾಟಕಕ್ಕೆ ಗಾಯದ ಮೇಲೆ ಮತ್ತೆ ಬರೆ ಎಳೆದಿದೆ.    ಕಾವೇರಿ ನದಿ ವಿವಾದ ಕುರಿತ ಅಂತಿಮ ವಿಚಾರಣೆಯನ್ನು ಜುಲೈ 11ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.  ಕಾವೇರಿ ಜಲವಿವಾದ ನ್ಯಾಯಮಂಡಳಿಯ 2007ರಲ್ಲಿ ನೀಡಿದ್ದ ಐತೀರ್ಪನ್ನು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪರ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಇಂದು ಮುಂದುವರಿಸಿತು..

ಕರ್ನಾಟಕದಲ್ಲಿ ಕುಡಿಯಲು ಸಹ ನೀರಿಲ್ಲ. ಇಂಥ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 2,000 ಕ್ಯುಸೆಕ್ಸ್ ನೀರು ಹರಿಸಲು ಕಷ್ಟವಾಗುತ್ತದೆ ಎಂದು ಕರ್ನಾಟಕ ಪರ ವಕೀಲ ಫಾಲಿ ಎಸ್. ನಾರಿಮನ್ ಮಂಡಿಸಿದ ವಾದಕ್ಕೆ ತಮಿಳುನಾಡು ಪರ ವಕೀಲ ಶೇಖರ್ ನಫಾಡೆ ಆಕ್ಷೇಪ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ನ್ಯಾಯವಾದಿಗಳು ಆರೋಪಿಸಿದರು. ಈ ಸಂದರ್ಭದಲ್ಲಿ ವಾದ-ಪ್ರತಿವಾದಗಳು ನಡೆದವು.
ನ್ಯಾಯಾಧಿಕರಣದ ಐತೀರ್ಪನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುವ ಕುರಿತಂತೆಯೇ ಎದುರಾಗಿದ್ದ ಕಾನೂನು ತೊಡಕು ಇತ್ಯರ್ಥವಾಗಿ ಈ ಮೊದಲೇ ನಿಗದಿಯಾದಂತೆ ಮೂಲದಾವೆಯ ವಿಚಾರಣೆಯು ಈಗಾಗಲೇ ಆರಂಭವಾಗಿದೆ.

ತಮಿಳುನಾಡು ಪ್ರತಿದಿನವೂ 2,000 ಕ್ಯುಸೆಕ್ಸ್ ನೀರು ಹರಿಸುವಂತೆ ಕಳೆದ ವರ್ಷ ಅಕ್ಟೋಬರ್ 15ರಂದು ನೀಡಿದ್ದ ಆದೇಶವನ್ನು ಮುಂದುವರಿಸಲಾಗಿದೆ.
ನೀರು ಹಂಚಿಕೆ ಪ್ರಮಾಣ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ನ್ಯಾಯಮಂಡಳಿ ನೀಡಿರುವ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ವಿಸ್ತøತ ಮಾಹಿತಿ ನೀಡುವಂತೆ ಸೂಚಿಸಿದ್ದ ನ್ಯಾಯಾಲಯವು ಸುದೀರ್ಘ ಅವಧಿಯಿಂದ ನೆನೆಗುದಿಗೆ ಬಿದ್ದಿರುವ ವಿವಾದ ಬಗೆಹರಿಸುವಲ್ಲಿ ಅದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿತ್ತು.

ಕಾವೇರಿ ನದಿ ವಿವಾದ ಕುರಿತು ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿದ ನಂತರವೇ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin