ವರ್ಗಾವಣೆಯಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಕಾನ್ಸ್ಟೆಬಲ್

ಈ ಸುದ್ದಿಯನ್ನು ಶೇರ್ ಮಾಡಿ

poison--suicide

ಕಲಬುರಗಿ, ಮಾ.21- ವರ್ಗಾವಣೆಯಿಂದ ಮನನೊಂದಿದ್ದ ಪೊಲೀಸ್ ಕಾನ್ಸ್ಟೆಬಲ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸರಸ್ವತಿಪುರ ಬಡಾವಣೆಯಲ್ಲಿ ನಡೆದಿದೆ. ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಚೌಹಾಣ್ ವಿಷ ಕುಡಿದ ಕಾನ್ಸ್‍ಟೆಬಲ್ ಆಗಿದ್ದು, ಈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಮಟ್ಕ ದಂಧೆಕೋರರಿಂದ ಹಫ್ತ ವಸೂಲಿ ಆರೋಪ ಇವರ ಮೇಲೆ ಕೇಳಿಬಂದಿತ್ತು. ಇವರ ವಿರುದ್ಧ ಇಲಾಖೆ ತನಿಖೆ ಕೂಡ ಆದೇಶಿಸಲಾಗಿತ್ತು. ಇದರಿಂದ ಮನನೊಂದಿದ್ದ ಆತ ಖಿನ್ನತೆಗೊಳಗಾಗಿ ಅನಾರೋಗ್ಯಪೀಡಿತರಾಗಿದ್ದರು. ಕಳೆದ ಒಂದು ವಾರದ ಹಿಂದೆಯಷ್ಟೆ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಂತೋಷ್ ಚೌಹಾಣ್‍ನನ್ನು ಚಿಂಚೋಳಿ ತಾಲೂಕಿನ ಕೊಂಚಾವರಂ ಪೊಲೀಸ್ ಠಾಣೆಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದರು. ಇದರಿಂದ ಮನನೊಂದಿದ್ದ ಈತ ನಿನ್ನೆ ಆದೇಶ ಪತ್ರ ತೆಗೆದುಕೊಂಡು ಮನೆಗೆ ಬಂದು ನಂತರ ವಿಷ ಕುಡಿದಿದ್ದ ಇವರನ್ನು ಕುಟುಂಬದ ಸದಸ್ಯರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇಂದು ಬೆಳಗ್ಗೆ ಎಸ್‍ಪಿ ಶಶಿಕಿರಣ್ ಆಸ್ಪತ್ರೆಗೆ ಭೇಟಿ ನೀಡಿ ಕಾನ್ಸ್‍ಟೆಬಲ್ ಆರೋಗ್ಯ ವಿಚಾರಿಸಿದ್ದಾರೆ. ವಿಶ್ವವಿದ್ಯಾನಿಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸಾಮೂಹಿಕ ವರ್ಗಾವಣೆ ರೀತಿಯಲ್ಲೇ ಎಸ್‍ಪಿಯವರು ಜಿಲ್ಲೆಯ ಸುಮಾರು 14 ಕಾನ್ಸ್‍ಟೆಬಲ್‍ಗಳನ್ನು ವರ್ಗಾವಣೆ ಮಾಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin