ಕಸಾಯಿಖಾನೆಗಳ ಮೇಲೆ ಛಾಟಿ ಬೀಸಿದ ಯೋಗಿ ಆದಿತ್ಯನಾಥ್

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath--01

ಲಕ್ನೋ, ಮಾ.22- ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎರಡೇ ದಿನಗಳಲ್ಲಿ ಯೋಗಿ ಆದಿತ್ಯನಾಥ್ ಕಸಾಯಿ ಖಾನೆಗಳ ವಿರುದ್ಧ ಬಲದವಾದ ಚಾಟಿ ಬೀಸಿದ್ದಾರೆ. ರಾಜ್ಯದಲ್ಲಿರುವ ಕಸಾಯಿ ಖಾನೆಗಳನ್ನು ಮುಚ್ಚಲು ಕ್ರಿಯಾ ಯೋಜನೆಯನ್ನು ರೂಪಿಸಲು ಪೊಲೀಸ್ ಇಲಾಖೆಗೆ ಆದೇಶ ನೀಡಿರುವ ಅವರು, ಗೋವುಗಳ ಕಳ್ಳ ಸಾಗಾಣಿಕೆಯನ್ನು ತಡೆಯು ವಂತೆಯೂ ಕಟ್ಟಪ್ಪಣೆ ಮಾಡಿದ್ದಾರೆ.  ಈ ಸಂಬಂಧ ಪೊಲೀಸ್ ಇಲಾಖೆಗೆ ಇಂದು ಆದೇಶ ಹೊರಡಿಸಿರುವ ಅವರು, ರಾಜ್ಯದಲ್ಲಿರುವ ಕಸಾಯಿ ಖಾನೆಗಳನ್ನು ಬಂದ್ ಮಾಡಲು ಪರಿಣಾಮಕಾರಿಯಾದ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಗೋವುಗಳ ಕಳ್ಳ ಸಾಕಾಣಿಕೆಯನ್ನು ನಿಷೇಧಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಕಸಾಯಿ ಖಾನೆಗೆ ಬೆಂಕಿ:

ಯೋಗಿ ಆದಿತ್ಯನಾಥ್ ಅವರ ಈ ಆದೇಶ ಹೊರ ಬೀಳುತ್ತಿದ್ದಂತೆ ದುಷ್ಕರ್ಮಿಗಳ ಗುಂಪೊಂದುಉತ್ತರ ಪ್ರದೇಶದ ಹಸ್ರತ್ ಪ್ರದೇಶದಲ್ಲಿ ಕಸಾಯಿಖಾನೆ ಹಾಗೂ ಮೂರು ಮಾಂಸದಂಗಡಿಗೆ ಬೆಂಕಿ ಹಚ್ಚಿ ದ್ವಂಷಗೊಳಿಸಿದ್ದಾರೆ. ಈ ಪ್ರದೇಶದಲ್ಲೀಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಅಹಿತಕರ ಘಟನೆ ನಡೆಯದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin