ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

hanging--suicide
ಚಾಮರಾಜಪೇಟೆ, ಮಾ.23- ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು , ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮಹದೇವಸ್ವಾಮಿ(32) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವಕ. ಗುಂಡ್ಲುಪೇಟೆ ತಾಲ್ಲೂಕಿನ ಕಮರಹಳ್ಳಿ ಬಳಿಯ ಕೋಳಿ ಫಾರ್ಮ್‍ನಲ್ಲಿ ಈತ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ . ಕೋಳಿ ಫಾರ್ಮ್ ಸಮೀಪದ ಮರದಲ್ಲಿ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹದೇವಸ್ವಾಮಿ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin