ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸಲು ಜೆಡಿಎಸ್ ಸಂಕಲ್ಪ

ಈ ಸುದ್ದಿಯನ್ನು ಶೇರ್ ಮಾಡಿ

JDS--025

ಬೆಂಗಳೂರು,ಮಾ.23- ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸುವ ಸಂಕಲ್ಪ ಮಾಡಿರುವ ಜೆಡಿಎಸ್ ಅಧಿಕಾರಕ್ಕೆ ಬಂದು ರೈತರ ಸಾಲ ಮನ್ನಾ, ಬಿಪಿಎಲ್ ಪಡಿತರಿಗೆ ಉಚಿತ ವಿದ್ಯುತ್ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ನಿರ್ಣಯ ಕೈಗೊಂಡಿದೆ.
ಅರಮನೆ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಸ್ವಾಭಿಮಾನಿ ಸಮಾವೇಶ ಹಾಗೂ ಜೆಪಿ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ರಮೇಶ್ ಬಾಬು ಈ ನಿರ್ಣಯವನ್ನು ಮಂಡಿಸಿದರು. [ ‘ಜೆಪಿ ಭವನ’ನಾಮಕರಣ : ಸ್ವಾಭಿಮಾನಿ ಸಮಾನತೆ ಸಮಾವೇಶದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ]

ರಾಜ್ಯ ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಫರೂಕ್ ಅವರು ನಿರ್ಣಯವನ್ನು ಅನುಮೋದಿಸಿದರು. ಮುಂದಿನ ದಿನಗಳಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವುದೇ ಸಂಕಲ್ಪ . ಆ ಮೂಲಕ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರಿಗೆಅರ್ಪಣೆಯಾಗಿದೆ ಎಂದರು.  ಈ ವೇದಿಕೆ ಮೂಲಕ ಪ್ರತಿಜ್ಞೆ ಮಾಡಿ ಪಕ್ಷದ ಸಾಧನೆ, ದೇವೇಗೌಡರು, ಕುಮಾರಸ್ವಾಮಿ ಅವರ ಆಡಳಿತ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಜನರಿಗೆ ತಲುಪಿಸಬೇಕು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸಬೇಕು, ರೈತರ ಸಾಲ ಮನ್ನಾ , ಬಿಪಿಎಲ್ ಕಾರ್ಡ್‍ದಾರರಿಗೆ ಉಚಿತ ವಿದ್ಯುತ್, 7ನೇ ವೇತನ ಆಯೊಗದ ಜಾರಿಗೊಳಿಸುವ ನಿರ್ಣಯವನ್ನು ಮಂಡಿಸಿದರು.   ಜನಸಾಮಾನ್ಯರು ನಿತ್ಯ ಕುಡಿಯುವ ನೀರು, ವಿದ್ಯುತ್ ದೀಪ, ಮನೆ ನಿರ್ಮಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin