ಉಪಚುನಾವಣೆಯಲ್ಲಿ ನಾವೇ ಗೆಲ್ಲೋದು : ಸಿದ್ದರಾಮಯ್ಯ
ಬೆಂಗಳೂರು, ಮಾ.24- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಉಪಚುನಾವಣೆಯಲ್ಲಿ ಆ ಪಕ್ಷದ ಪರವಾಗಿ ಪ್ರಚಾರ ಮಾಡಿದರೂ ಬಿಜೆಪಿ ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣ ಅವರು ಬಿಜೆಪಿ ಸೇರಿದ ಮೇಲೆ ಆ ಪಕ್ಷದ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದು ಸಹಜ. ಆದರೆ, ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಭ್ರಮೆಯಲ್ಲಿದ್ದಾರೆ ಎಂದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಯಡಿಯೂರಪ್ಪನವರು ಹೇಳಿರುವುದು ಭ್ರಮೆಯಲ್ಲವೆ ಎಂದು ಲೇವಡಿ ಮಾಡಿ, 150 ಸೀಟು ಗೆಲ್ಲುವುದು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments