ಕ್ರಿಮಿನಲ್’ಗಳ ಚುನಾವಣೆ ಸ್ಪರ್ಧೆ ನಿಷೇಧ : ಅಭಿಪ್ರಾಯ ಸಲ್ಲಿಕೆಗೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ, ಮಾ.24-ಘೋಷಿತ ಅಪರಾಧಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸುವುದಕ್ಕೆ ಸಂಬಂಧಪಟ್ಟಂತೆ ಏಳು ದಿನಗಳಲ್ಲಿ ಅಭಿಪ್ರಾಯ ತಿಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.   ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರನ್ನು ಒಳಗೊಂಡ ಪೀಠ ಇಂದು ಈ ಕುರಿತು ಅರ್ಜಿ ವಿಚಾರಣೆ ನಡೆಸಿತು. ಘೋಷಿತ ಅಪರಾಧಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಪಡೆಯಬೇಕಿದೆ. ಹೀಗಾಗಿ ಏಳು ದಿನಗಳ ಒಳಗೆ ಈ ಸಂಬಂಧ ತನ್ನ ಅಭಿಪ್ರಾಯವನ್ನು ಕೇಂದ್ರವು ಸಲ್ಲಿಸುವಂತೆ ಸೂಚಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin