ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಲು ಒಕ್ಕೊರಲ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Shivakumar-Shree

ತುಮಕೂರು, ಮಾ.24- ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ, ಬಡ ಮಕ್ಕಳಿಗೆ ಜ್ಞಾನದಾತರಾಗಿರುವ ಹಾಗೂ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನದಾತರಾಗಿರುವ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರು 110ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಲಕ್ಷಾಂತರ ಭಕ್ತವೃಂದ ಒಕ್ಕೊರಲ ಮನವಿ ಮಾಡಿದೆ.  ಶ್ರೀಗಳು 110ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಶುಭ ಸಂದರ್ಭದಲ್ಲಿ ಭಾರತರತ್ನ ಲಭಿಸಿದರೆ ಭಕ್ತವೃಂದಕ್ಕೆ ಸಂತೋಷವಾಗಲಿದೆ ಎಂದು ತುಮಕೂರಿನವರೇ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರೂ ಆದ ಡಾ.ಜಿ.ಪರಮೇಶ್ವರ್ ಅವರು ರಾಜ್ಯ ಸರ್ಕಾರದ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು 110ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಸಂತಸ ತಂದಿದ್ದು, ಇಳಿ ವಯಸ್ಸಿನಲ್ಲೂ ತಮ್ಮ ಕಾಯಕದಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವುದು ದೈವಶಕ್ತಿಯಾಗಿದೆ.  ಏ.1ರಂದು ಶ್ರೀಗಳ ಹುಟ್ಟುಹಬ್ಬದ ನಿಮಿತ್ತ ಈಗಿನಿಂದಲೇ ನಗರದಾದ್ಯಂತ ದಿನಕ್ಕೊಂದು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ವಾರ್ಡ್‍ಗಳಲ್ಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಭಕ್ತವೃಂದದವರಲ್ಲಿ ಸಂತಸ ತಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin