ನಗರ-ಪಟ್ಟಣಗಳಲ್ಲಿ ವಿದ್ಯುತ್ ಕಡಿತ ಇಲ್ಲ, ವಿದ್ಯಾರ್ಥಿಗಳ ಹಿತಕ್ಕಾಗಿ ಸರ್ಕಾರದ ಕ್ರಮ : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

DK-Shihvakumar-Sission

ಬೆಂಗಳೂರು, ಮಾ.24– ರಾಜ್ಯದ ಯಾವುದೇ ಭಾಗದಲ್ಲೂ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ ಹಾಗೂ ಶಾಲಾ -ಕಾಲೇಜುಗಳ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಮರ್ಪಕ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರ, ಪಟ್ಟಣ ಪ್ರದೇಶಗಳಲ್ಲಿ 22-24 ಗಂಟೆ, ಗ್ರಾಮೀಣ ಭಾಗದಲ್ಲಿ ನಿತ್ಯ 7 ಗಂಟೆ 3 ಪೇಸ್ ಹಾಗೂ ಬೆಳಗ್ಗೆ 6ರಿಂದ 10 ಗಂಟೆಗಳ ಕಾಲ ನಿರಂತರ ವಿದ್ಯುತ್ ಒದಗಿಸಲಾಗುತ್ತಿದೆ ಎಂದರು.

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗಬಹುದೆಂಬ ಹಿನ್ನೆಲೆಯಲ್ಲಿ 1000 ಮೆ.ವ್ಯಾ.ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಸರಬರಾಜು ಕುರಿತಂತೆ ಎಲ್ಲ ಶಾಸಕರಿಗೆ ಪ್ರತಿ ಪೀಡರ್‍ವಾರು ಮಾಹಿತಿ ಒದಗಿಸಲು ಸಿದ್ದವಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಕೆಲವೆಡೆ ತಾಂತ್ರಿಕ ತೊಂದರೆಯಿಂದ ವ್ಯತ್ಯಯವಾಗುತ್ತಿದೆ ಎಂದರು. ಮಹದೇವಪುರದ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಶಾಸಕರನ್ನೊಳಗೊಂಡ ಸಭೆ ನಡೆಸಲಾಗುವುದು. ಶರಾವತಿಯಲ್ಲಿ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ನೀರನ್ನು ಬಳಸಲಾಗುತ್ತಿದೆ. ವಿತರಣೆ ಮತ್ತು ಪೂರೈಕೆಯಲ್ಲಿ ಬೆಸ್ಕಾಂ ಮೊದಲ ಸ್ಥಾನದಲ್ಲಿದ್ದು, ಇತ್ತರೆ ನಿಗಮಗಳೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

1200 ಮೆ.ವ್ಯಾ. ಸಾಮಥ್ರ್ಯದ ತಾಲ್ಲೂಕು ವಾರು ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಎರಡು ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಯಾವಗಲ್ ಪ್ರಶ್ನೆಗೆ ಸಚಿವರು ಉತ್ತರಿಸಿದರು.  ಈ ವಿದ್ಯುತ್ ಇದೇ ವರ್ಷದ ಸೆಪ್ಟೆಂಬರ್ ಅಂತ್ಯದೊಳಗೆ ಅನುಷ್ಠಾನವಾಗಲಿದೆ. ಪ್ರತಿ ಯುನಿಟ್‍ಗೆ 5.48 ರೂ.ನಂತೆ ಸ್ಥಳೀಯ ವಿದ್ಯುತ್ ಸರಬರಾಜು ಘಟಕ ಖರೀದಿಸುವ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin