ವೈದ್ಯರ ಸಾಮೂಹಿಕ ರಜೆಯಿಂದಾಗಿ 800ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Doctors--01

ನವದೆಹಲಿ, ಮಾ.24-ದೇಶದ ರಾಜಧಾನಿಯ 20,000ಕ್ಕೂ ಹೆಚ್ಚು ಸ್ಥಾನಿಕ ವೈದ್ಯರ ಸಾಮೂಹಿಕ ರಜೆಯಿಂದಾಗಿ ನಿನ್ನೆ ದೆಹಲಿಯ ಸರ್ಕಾರಿ ಮತ್ತು ಮಹಾನಗರ ಪಾಲಿಕೆ ಆಸ್ಪತ್ರೆಗಳಲ್ಲಿ 800ಕ್ಕೂ ಅಧಿಕ ಶಸ್ತ್ರಚಿಕಿತ್ಸೆಗಳು ಮುಂದೂಡಲಾಗಿದೆ. ಅಲ್ಲದೇ ನೂರಾರು ಹೊರರೋಗಿಗಳಿಗೆ ಚಿಕಿತ್ಸೆ ಇಲ್ಲದೇ ನರಳುವಂತಾಗಿದೆ.   ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ದೆಹಲಿಯ ಸರ್ಕಾರಿ ವೈದ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದ್ದರಿಂದ ರೋಗಿಗಳು ತೀವ್ರ ಯಾತನೆ ಅನುಭವಿಸಿದರು. ಮಹಾರಾಷ್ಟ್ರದಲ್ಲಿ ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿ ಅಲ್ಲಿ ನಡೆದ ಪ್ರತಿಭಟನೆಗೆ ದೆಹಲಿಯ ವೈದ್ಯರೂ ಬೆಂಬಲ ವ್ಯಕ್ತಪಡಿಸಿದ್ದರು.

ಸರ್ಕಾರ ನೀಡಿದ ಭರವಸೆ ಮೇಲೆ ನಿನ್ನೆ ರಾತ್ರಿ ಮಹಾರಾಷ್ಟ್ರ ವೈದ್ಯರು ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ಧರಣಿ ಕೈಬಿಟ್ಟಿದ್ದರೂ ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin