ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನಲ್ಲಿ 10 ಲಕ್ಷ ಸಸಿ ನೆಡುವ ಗುರಿ

ಈ ಸುದ್ದಿಯನ್ನು ಶೇರ್ ಮಾಡಿ

Planation--01

ಬೆಂಗಳೂರು, ಮಾ.25- ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ನಗರದಲ್ಲಿ 10 ಲಕ್ಷ ಸಸಿಗಳನ್ನು ನೆಡಲಾಗುವುದು ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ಗುಣಶೇಖರ್ ಪಾಲಿಕೆ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ರಸ್ತೆ ಬದಿ ಗಿಡಗಳನ್ನು ನೆಡಲು ಮತ್ತು ಅವುಗಳಿಗೆ ಸಂಖ್ಯೆಗಳನ್ನು ನೀಡುವುದಕ್ಕಾಗಿ 6 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಅವರು ಹೇಳಿದ್ದಾರೆ. ರಸ್ತೆ ಬದಿ ಮರಗಳನ್ನು ರಕ್ಷಿಸಲು ಸ್ವಯಂ ಸೇವಕರನ್ನು ಟ್ರೀ-ವಾರ್ಡ್‍ನ್‍ಗಳಾಗಿ ನೇಮಕ ಮಾಡಲಾಗುವುದು. ಕೆರೆಗಳು ಇರುವ ಪ್ರದೇಶಗಳಲ್ಲಿ 5 ಹೊಸ ನರ್ಸರಿಗಳನ್ನು ಆರಂಭಿಸಲಾಗುವುದು. ಇದಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪಾಲಿಕೆ ಶಾಲಾ ಕಾಲೇಜುಗಳ ಆವರಣದಲ್ಲಿ ಕೈತೋಟ ಪ್ರಾರಂಭಕ್ಕಾಗಿ 1 ಕೋಟಿ ರೂ.ಗಳ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕ್ಕೆ ಸಿಲುಕುವ ಪ್ರಾಣಿ-ಪಕ್ಷಿಗಳ ಸಂರಕ್ಷಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ 25 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin