ಹಿಂದುಳಿದ ವರ್ಗಗಳ ರಕ್ಷಣೆಗೆ ಸರ್ಕಾರ ಬದ್ಧ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha--01

ಬೆಂಗಳೂರು, ಮಾ.26- ಹಿಂದುಳಿದ ವರ್ಗಗಳ ಹಿತರಕ್ಷಣೆಗೆ ಬದ್ಧವಾಗಿದ್ದೇವೆ. ಬೇರೆಯವರು ಬಾಯಿ ಮಾತಲ್ಲಿ ಹೇಳುತ್ತಾರೆ. ನಾವು ಮಾಡಿ ತೋರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘಗಳ ಸಮನ್ವಯ ಸಮಿತಿ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಎಸ್‍ಸಿ-ಎಸ್‍ಟಿ ಸೇರಿದಂತೆ ಎಲ್ಲ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಿಂದಿನ ಸರ್ಕಾರಗಳು ನೀಡದ ಅತಿ ಹೆಚ್ಚು ಅನುದಾನವನ್ನು ನಮ್ಮ ಸರ್ಕಾರ ನೀಡಿದೆ ಎಂದರು.

ಆರ್ಥಿಕ ಸಮಾನತೆ ಬಂದರೆ ಜಾತೀಯತೆ ತೊಲಗುತ್ತದೆ, ಶೋಷಣೆ ಮುಕ್ತವಾಗುತ್ತದೆ. ಶೋಷಣೆ ಮುಕ್ತ ಸಮಾನತೆಯ ಸಮಾಜ ನಮ್ಮ ಆಶಯ ಎಂದು ಅಭಿಪ್ರಾಯಪಟ್ಟರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶೇಷ ರೀತಿಯಲ್ಲಿ ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ನೃತ್ಯ ರೂಪಕ ಪ್ರದರ್ಶನಗೊಳ್ಳುತ್ತಿದ್ದಂತೆ ಅವರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು.
ಸಭಾಂಗಣದ ಹೊರಗೂ-ಒಳಗೂ ಕಿಕ್ಕಿರಿದು ಜನ ತುಂಬಿ ತುಳುಕುತ್ತಿದ್ದರು. ಸಮಾರಂಭ ತಡವಾಗಿ ಆರಂಭವಾದರೂ ಎಲ್ಲರೂ ಉತ್ಸುಕರಾಗಿ ಕಾಯುತ್ತಿದ್ದುದು ಕಂಡುಬಂದಿತು.

ಸಾಂಸ್ಕøತಿಕ ಕಾರ್ಯಕ್ರಮಗಳು, ಜಾನಪದ ಕಲಾತಂಡಗಳ ಪ್ರದರ್ಶನ, ಹಾಡು, ನೃತ್ಯಗಳು ಕಾರ್ಯಕ್ರಮದುದ್ದಕ್ಕೂ ಮೇಳೈಸಿದ್ದವು.  ಸಚಿವ ಆಂಜನೇಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಮಹಾರಾಜರು ಧರಿಸುವಂತಹ ಮಾದರಿಯ ಸೂಟನ್ನು ಹಾಕಿ, ಬೆಳ್ಳಿ ಕಿರೀಟ ಹಾಗೂ ಕತ್ತಿ ನೀಡಿ ಅಭಿನಂದನೆ ಸಲ್ಲಿಸಲಾಯಿತು.  ಸಮಾರಂಭದಲ್ಲಿ ಸಚಿವರಾದ ಟಿ.ಬಿ.ಜಯಚಂದ್ರ, ಈಶ್ವರ ಖಂಡ್ರೆ, ರಮಾನಾಥ ರೈ, ಉಮಾಶ್ರೀ, ಸಂಸದ ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಮುಖಂಡರಾದ ಆಸ್ಕರ್ ಫರ್ನಾಂಡಿಸ್ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin