ಚದುರಿದ್ದ ನಾಯಕ ಜನಾಂಗ ಬಿಜೆಪಿಯಡಿಯಲ್ಲಿ ಒಂದಾಗಿದೆ : ಬಿ.ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

NANJANAGUDU
ನಂಜನಗೂಡು, ಮಾ.28- ಈ ಹಿಂದೆ ಹಲವು ಪಕ್ಷಗಳಲ್ಲಿ ಹಂಚಿಹೋಗಿದ್ದ ನಾಯಕ ಜನಾಂಗ ಇದೀಗ ಬಿಜೆಪಿಯಡಿಯಲ್ಲಿ ಒಂದಾಗಿದ್ದು ಬದಲಾವಣೆಯ ಪರ್ವದೆಡೆಗೆ ಮುಖ ಮಾಡಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರ ಪರ ತಾಲೂಕಿನ ಸೂರಳ್ಳಿ ಮತ್ತಿತರ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ನಡೆಸಿ ಮಾತನಾಡಿದರು. ನಾನು ಈ ಹಿಂದೆ ಬೇರೆ ಪಕ್ಷದಲ್ಲಿದ್ದಾಗ ನಾಯಕ ಸಮುದಾಯ ಆ ಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಇದೀಗ ನಾನು ಬಿಜೆಪಿಗೆ ಬಂದಿರುವುದರಿಂದ ನಾಯಕ ಜನಾಂಗದ ಶೇ.80ರಷ್ಟು ಜನರು ಬಿಜೆಪಿಗೆ ಸೇರಿದ್ದಾರೆ.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆಯಿಟ್ಟು, ಬಿ.ಎಸ್.ಯಡಿಯೂರಪ್ಪಅವರನ್ನು ಬೆಂಬಲಿಸುವ ಉದ್ದೇಶದಿಂದ ಇಂಥ ಬೆಳವಣಿಗೆ ನಡೆದಿದೆ ಎಂದು ತಿಳಿಸಿದರು.ತಳವಾರ ಮತ್ತು ಪರಿವಾರ ಸಮುದಾಯದವರು ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಕೊಡಿಸುವಂತೆ ಬೇಡಿಕೆಯಿದೆ. ಈ ಬೇಡಿಕೆಯನ್ನು ಈಡೇರಿಸಲು ತಾವು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಶ್ರಮಿಸುವುದಾಗಿ ತಿಳಿಸಿದರು.
ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಚಿಕ್ಕರಂಗನಾಯಕ, ಎಪಿಎಂಸಿ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ ನಾಯಕ, ಆನಂದ, ಬಸವನಾಯಕ, ಸುರೇಶ್‍ಸೇರಿದಂತೆ ಹಲವಾರು ಪ್ರಮುಖರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin