ಅಕ್ರಮ ಕಸಾಯಿಖಾನೆ ಪರಿಶೀಲನೆ ವೇಳೆ ಉದ್ರಿಕ್ತರ ದಾಳಿ, ಐವರು ಪೊಲೀಸರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Uttar-Pradesh

ಸಂಭಾಲ್, ಮಾ.30-ಅಕ್ರಮ ಕಸಾಯಿಖಾನೆಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಉದ್ರಿಕ್ತ ಗುಂಪು ನಡೆಸಿದ ದಾಳಿಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕೆಲವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಸಂಬಾಲ್‍ನಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣಗೊಂಡಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.   ಅಕ್ರಮ ಮತ್ತು ಯಾಂತ್ರೀಕೃತ ಕಸಾಯಿ ಖಾನೆಗಳ ವಿರುದ್ಧ ರಾಜ್ಯದಾದ್ಯಂತ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು ಸಂಭಾಲ್‍ನ ಅನಧಿಕೃತ ಸರಣಿ ಮಾಂಸದಂಗಡಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾಗ ಉದ್ರಿಕ್ತರ ಗುಂಪೊಂದು ದಾಳಿ ನಡೆಸಿತು.

ಗುಂಪನ್ನು ಚದುರಿಸಲು ಪೊಲೀಸರು ಮುಂದಾದಾಗ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಐವರು ಪೊಲೀಸರೂ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರನ್ನು ಬಂಧಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin