ಜೆಡಿಎಸ್‍ನ ಬಂಡಾಯ ಶಾಸಕರು ಕಾಂಗ್ರೆಸ್‍ಗೆ

ಈ ಸುದ್ದಿಯನ್ನು ಶೇರ್ ಮಾಡಿ

jds

ಬೆಂಗಳೂರು, ಮಾ.30- ಜೆಡಿಎಸ್‍ನ ಬಂಡಾಯ ಶಾಸಕರು ಕಾಂಗ್ರೆಸ್‍ಗೆ ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‍ನ ಬಂಡಾಯ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಸೇರಲು ದಿನಾಂಕ ನಿಗದಿ ಬಗ್ಗೆಯೂ ಚರ್ಚೆ ನಡೆದಿದೆ. ಜತೆಗೆ ಜೆಡಿಎಸ್‍ನ ಬಂಡಾಯ ಶಾಸಕರ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಆದಷ್ಟು ಬೇಗ ಜೆಡಿಎಸ್ ಬಂಡಾಯ ಶಾಸಕರು ನಮ್ಮ ಪಕ್ಷಕ್ಕೆ ಸೇರ್ಪಡೆ ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸೇರ್ಪಡೆ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಳ್ಳುತ್ತಿದೆ. ಈಗಾ ಗಲೇ ಹೈಕಮಾಂಡ್ ನಾಯಕರಿಗೂ ಈ ವಿಚಾರ ತಿಳಿಸಲಾಗಿದೆ. ಅವರಿಂದ ಈ ಬಗ್ಗೆ ನಿರ್ಧಾರ ಹೊರಬರಬೇಕಿದೆ ಎಂದು ವಿವರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin