ಬಜೆಟ್‍’ನಲ್ಲಿ ಘೋಷಿಸಿದಂತೆ ಅನ್ನಭಾಗ್ಯ ಅಕ್ಕಿಯ ಪ್ರಮಾಣ 7 ಕೆಜಿಗೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Anna-Bhagya--01

ಬೆಂಗಳೂರು, ಮಾ.30- ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಅಕ್ಕಿ ಹೆಚ್ಚಳ ಪ್ರಮಾಣ ಏ.1ರಿಂದ ಜಾರಿಗೆ ಬರಲಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಇದುವರೆಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿ ಕುಟುಂಬದ ಪ್ರತೀ ಸದಸ್ಯರಿಗೆ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯ ಪ್ರಮಾಣ ಇನ್ನು ಮುಂದೆ 7 ಕೆಜಿಗೆ ಏರಿಕೆಯಾಗಲಿದೆ. ರಾಜ್ಯದ 1.8 ಕೋಟಿ ಕುಟುಂಬಗಳ ಸದಸ್ಯರಿಗೆ ಇನ್ನು ಮುಂದೆ ಪ್ರತಿಯೊಬ್ಬರಿಗೂ 7 ಕೆಜಿ ಅಕ್ಕಿ ಸಿಗಲಿದೆ. ಈ ಮೊದಲು ನೀಡುತ್ತಿದ್ದ ಆಹಾರ ಧಾನ್ಯದ ಪ್ರಮಾಣಕ್ಕಿಂತ ಶೇ.40ರಷ್ಟು ಹೆಚ್ಚು ಪಡಿತರವನ್ನು ಮುಂದಿನ ತಿಂಗಳಿಂದ ಫಲಾನುಭವಿಗಳಿಗೆ ವಿತರಿಸಲಾಗುವುದು.

ಈ ಬಾರಿ ಮಳೆ ಕೊರತೆಯಿಂದ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಸಹಜವಾಗಿ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗುವ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಸದಸ್ಯರಿಗೆ 7 ಕೆಜಿ ಅಕ್ಕಿ ನೀಡುತ್ತಿರುವುದರಿಂದ ತಿಂಗಳ ಪೂರ್ತಿ ಆಹಾರ ಧಾನ್ಯ ಸಾಕಾಗಲಿದ್ದು, ಮಾರುಕಟ್ಟೆಯಲ್ಲಿ ಖರೀದಿ ಮಾಡುವ ಅನಿವಾರ್ಯತೆ ಎದುರಾಗುವುದಿಲ್ಲ.  ಅಕ್ಕಿಯ ಬೆಲೆ ಏರಿಕೆಯಿಂದ ಜನ ತತ್ತರಿಸುವುದರಿಂದ ಸ್ವಲ್ಪ ವಿನಾಯ್ತಿ ಸಿಕ್ಕಂತಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ.
ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಬಿಪಿಎಲ್ ಕುಟುಂಬದವರಿಗೆ ಅನುಕೂಲವಾಗಿದೆ. ಈ ಯೋಜನೆಯಿಂದ ಜನ ಸೋಮಾರಿಗಳಾಗುತ್ತಾರೆ ಎಂಬ ಟೀಕೆಯೂ ವ್ಯಕ್ತವಾಗಿತ್ತು. ಆದರೆ, ಅದ್ಯಾವುದನ್ನೂ ಲೆಕ್ಕಿಸದೆ ಈ ಯೋಜನೆ ಮುಂದುವರಿಸಲಾಗಿದ್ದು, ಈಗ ಅಕ್ಕಿಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin