ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

CCTV-Madikeri

ಮಡಿಕೇರಿ, ಮಾ.30 – ಮೊಬೈಲ್ ಅಂಗಡಿಗೆ ನುಗ್ಗಿದ ನಾಲ್ವರು ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಾರ್ಕೆಟ್‍ಯಾರ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜುಬೇರ್(23) ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮಾಲೀಕ. ಮಡಿಕೇರಿ ಕೈಗಾರಿಕಾ ಪ್ರದೇಶದಲ್ಲಿ ಜುಬೇರ್ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದಾರೆ.  ನಿನ್ನೆ ರಾತ್ರಿ ಅಂಗಡಿಗೆ ನುಗ್ಗಿರುವ ನಾಲ್ವರು ಜುಬೇರ್ ಮೇಲೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜುಬೇರ್‍ನನ್ನು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿ ಟಿವಿ ದೃಶ್ಯದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಮಾರ್ಕೆಟ್‍ಯಾರ್ಡ್ ಠಾಣೆ ಪೊಲೀಸರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin