ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಮೈಸೂರು,ಮಾ.31-ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ಜನಮತ ಗಣನೆ ಆಗುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 4 ವರ್ಷದ ತಮ್ಮ ಸರ್ಕಾರದ ಅಭಿವೃದ್ದಿಯನ್ನು ರಾಜ್ಯದ ಜನತೆ ಒಪ್ಪಿಕೊಂಡಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ತಿಳಿಯಲು ಈ ಚುನಾವಣೆ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.   ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಭಿವೃದ್ದಿ ಕಾರ್ಯ ಮಾಡುತ್ತದೆ. ಅದಕ್ಕಾಗಿ ಜನರ ಬಳಿ ಮತ ಕೇಳಲು ಹೋಗುತ್ತಿದ್ದೇವೆ ಎಂದರು.

ದಲಿತರ ಮೀಸಲಾತಿಯನ್ನು ಶೇ.72ಕ್ಕೆ ಹೆಚ್ಚಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ, ನೆರೆಯ ರಾಜ್ಯ ತಮಿಳುನಾಡಿನಲ್ಲಿ ಶೇ.69 ಮೀಸಲಾತಿ ಇದೆ. ಹಾಗಾಗಿ ತಜ್ಞರೊಂದಿಗೆ ಚರ್ಚಿಸಿ ಮೀಸಲಾತಿ ಹೆಚ್ಚಿಸಲಾಗುವುದು ಎಂದರು.   ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರನ್ನು ಮುಗಿಸಲು ಹೋರಟಿದ್ದಾರೆ ಎಂಬ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸೇರಿದಂತೆ ಅನೇಕ ದಲಿತ ನಾಯಕರು ನಮ್ಮಲ್ಲಿ ಇದ್ದಾರೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin