ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-Hang-Girl

ಕೆಜಿಎಫ್, ಮಾ.31- ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ಭೀತಿಗೊಳಗಾದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಬರ್ಟ್‍ಸನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಲ್ಕನೇ ಬ್ಲಾಕ್ ಬಡಾವಣೆ ನೀವಾಸಿ ಶ್ರೀನಿವಾಸನ್ ಎಂಬುವರ ಪುತ್ರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಭೀತಿಗೊಳಗಾಗಿ ನೇಣಿಗೆ ಶರಣಾಗಿದ್ದಾಳೆ.  ಎಸ್ಸೆಸ್ಸೆಲ್ಸಿ ಪರೀಕ್ಷೆ ಹತ್ತಿರ ಬರುತ್ತಿದ್ದು, ನನಗೆ ಭಯವಾಗುತ್ತಿದೆ ಎಂದು ಪೋಷಕರಲ್ಲಿ ಕಳೆದೆರಡು ದಿನಗಳಿಂದ ಹೇಳಿಕೊಂಡಿದ್ದಾಳೆ. ಮನೆಯವರು ಸಹ ಹೆದರಬೇಡ ಎಂದು ಧೈರ್ಯ ತುಂಬಿದ್ದರೂ ಆಕೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ರಾಬರ್ಟ್‍ಸನ್‍ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin