ಪಾಕಿಸ್ತಾನ : ಮಾನವ ಬಾಂಬ್ ಸ್ಫೋಟದಲ್ಲಿ 8 ಸಾವು, 40 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Pakistan-Blast

ಇಸ್ಲಾಮಾಬಾದ್, ಮಾ.31-ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಮಾನವ ಬಾಂಬ್ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟು 40ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ.  ಪರಾಚಿನರ್‍ನ ಸಂಡಕ್ ಬಜಾರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ ಸಾವು-ನೋವು ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin