10 ದಿನಗಳ ಹಿಂದೆ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಜೈಲಲ್ಲೇ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-e

ಧಾರವಾಡ,ಮಾ.31– ಅಪ್ರಾಪ್ತ ಬಾಲಕಿಯೊರ್ವಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ದಿನಗಳ ಹಿಂದೆ ಕೇಂದ್ರ ಕಾರಾಗೃಹ ಸೇರಿದ್ದ ಖೈದಿಯೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಗಣೇಶ್ ಪೇಟ್ ನಿವಾಸಿ ಅಬ್ದುಲ್ ಕಲಾಂ ಶೇಖ್(30) ಆತ್ಮಹತ್ಯೆ ಮಾಡಿಕೊಂಡ ಖೈದಿ.  ಹತ್ತು ದಿನಗಳ ಹಿಂದೆ ಈತನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಘಂಟಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈತನನ್ನು ಉಪಕಾರಾಗೃಹಕ್ಕೆ ಕಳಿಸಿದ್ದರು.  ನಿನ್ನೆ ರಾತ್ರಿ 12.30ರ ಸುಮಾರಿನಲ್ಲಿ ಈತನು ನೇಣಿಗೆ ಶರಣಾಗಿದ್ದಾನೆ. ರಾತ್ರಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಕ್ರರಣದ ತನಿಖೆ ಮುಂದುವರಿದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin