ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾಮಗಾರಿಗೆ ಶೀಘ್ರದಲ್ಲೇ 29 ಕೋಟಿ ರೂ. ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Shyamanuru-Shivashanrappa

ದಾವಣಗೆರೆ, ಏ.1- ಕೃಷಿ ಉತ್ಪನ್ನ ಮಾರುಕಟ್ಟೆಯ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ 29 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ತೋಟಗಾರಿಕೆ ಮತ್ತು ಎಪಿಎಂಸಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಎಪಿಎಂಸಿ ವ್ಯಾಪ್ತಿಯ ತರಕಾರಿ ಮಾರುಕಟ್ಟೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ತರಕಾರಿ ಮಾರಾಟ ಮಳಿಗೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅನಾಹುತ ಸಂಭವಿಸಿತ್ತು. ಆಗ 20 ತರಕಾರಿ ಮಳಿಗೆಗಳು ಭಸ್ಮವಾಗಿದ್ದವು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಸಿ 10 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಿ ನೂತನ ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಎಪಿಎಂಸಿಗೆ 170 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ 29 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ತಿಳಿಸಿದರು.  ಒಂದು ಮಳಿಗೆಗೆ 50 ಲಕ್ಷ ರೂ. ಖರ್ಚಾಗಲಿದ್ದು, ನಾಲ್ಕರಿಂದ ಐದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮನೆಗಳನ್ನು ನಿರ್ಮಿಸಲು ಬೋರಗೊಂಡನಹಳ್ಳಿಯಲ್ಲಿ 20 ಎಕರೆ ಜಮೀನು ಖರೀದಿಸಲು ಯೋಚಿಸಲಾಗಿದ್ದು, ಶೀಘ್ರದಲ್ಲೇ ಮನೆ ನಿರ್ಮಿಸುವುದಾಗಿ ಹೇಳಿದರು.  ಮಹಾನಗರ ಪಾಲಿಕೆ ಮೇಯರ್ ರೇಖಾ ನಾಗರಾಜ್, ಜಿಪಂ ಸದಸ್ಯ ಬಸವಂತಪ್ಪ, ಎಪಿಎಂಸಿ ಅಧ್ಯಕ್ಷ ಮುದ್ದೇಗೌಡ, ಗಿರೀಶ ಮತ್ತಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin