ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆಗೆ ಎಲ್ಲಾ ನೌಕರರಿಗೆ ವೇತನ ಸಹಿತ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Voting--01

ಬೆಂಗಳೂರು, ಏ.2- ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೆ ಇದೇ 9ರಂದು ಮತದಾನ ನಡೆಯಲಿದ್ದು, ಈ ಎರಡೂ ಕ್ಷೇತ್ರದ ಎಲ್ಲಾ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.  ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವ್ಯವಹಾರಿಕ, ಔಧ್ಯಮಿಕ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಆದೇಶ ನೀಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin