ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಏಳು ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arested
ಬೆಂಗಳೂರು, ಏ.4- ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಏಳು ಮಂದಿಯನ್ನು ದಕ್ಷಿಣ ವಿಭಾಗದ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿ ಪಿಸ್ತೂಲು ಮತ್ತು ನಾಲ್ಕು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಜಗದೀಶ (28), ವಾಸುದೇವ (38), ಶಿವ ಸುಬ್ರಹ್ಮಣಿ (32), ಪ್ರಮೋದ (29), ಶಿವರಾಮು (34), ಅಯ್ಯಪ್ಪ (33), ನಿರಂಜನ್ ಶರ್ಮ (46) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಕೃತ್ಯಕ್ಕೆ ಬಳಸಿದ್ದ ಟಾಟಾ ಇನ್ನೋವಾ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಈ ಏಳು ಮಂದಿ ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘಿಸಿ ಪಿಸ್ತೂಲು ಹಾಗೂ ಜೀವಂತ ಗುಂಡುಗಳನ್ನು ಹೊಂದಿದ್ದರು.ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಇವರು ಪುಟ್ಟೇನಹಳ್ಳಿ ವ್ಯಾಪ್ತಿಯ ಪಾಂಡುರಂಗ ನಗರದಲ್ಲಿ ತನ್ಮಯ್ ಬೇತಾಲ್ ಎಂಬುವರ ಕೊಲೆಗೆ ಯತ್ನಿಸಿದ್ದರು. ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಶರಣಪ್ಪ ಮಾರ್ಗದರ್ಶನದಲ್ಲಿ, ಸುಬ್ರಹ್ಮಣ್ಯ ಉಪವಿಭಾಗದ ಪೊಲೀಸ್ ಆಯುಕ್ತ ಮಂಜುನಾಥ ಚೌಧರಿ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಧರ್ಮೇಂದ್ರ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin